ಹುಬ್ಬಳ್ಳಿ: ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲ್ ಬಳಿಯಲ್ಲಿ ವಿದ್ಯುತ್ ಕಂಬ ಹಾಗೂ ಮರವೊಂದು ಮುರಿ ಬಿದ್ದಿರುವ ಘಟನೆ ಜರುಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
Advertisement
ಏಕಾಏಕಿ ಮರ ಹಾಗೂ ವಿದ್ಯುತ್ ಕಂಬ ಮುರಿದು ಬಿದ್ದಿರುವ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ವಿದ್ಯುತ್ ಪ್ರವಹಿಸುವ ಕಂಬ ಆಟೋಗಳ ಮೇಲೆ ಬಿದ್ದಿದ್ದು, ಆಟೋಗಳು ಸಂಪೂರ್ಣ ಜಖಂಗೊಂಡಿವೆ.
ಇನ್ನೂ ಸಾಕಷ್ಟು ಆಯಕಟ್ಟಿನ ಸ್ಥಳಗಳಲ್ಲಿ ಒಂದಾಗಿರುವ ನ್ಯೂ ಇಂಗ್ಲೀಷ್ ಸ್ಕೂಲ್ ಬಳಿಯಲ್ಲಿಯೇ ಇಂತಹದೊಂದು ಘಟನೆ ನಡೆದಿದ್ದು, ಸಾರ್ವಜನಿಕರು ಹೆಸ್ಕಾಂ ಹಾಗೂ ಪಾಲಿಕೆ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.