HomeBengaluru Newsಹಣ ಕಳ್ಳತನದ ಸುಳ್ಳು ದೂರು: ಎಟಿಎಂ ನಿರ್ವಹಣಾ ಸಿಬ್ಬಂದಿಯ ವಿರುದ್ಧ FIR, ಐವರು ಅರೆಸ್ಟ್!

ಹಣ ಕಳ್ಳತನದ ಸುಳ್ಳು ದೂರು: ಎಟಿಎಂ ನಿರ್ವಹಣಾ ಸಿಬ್ಬಂದಿಯ ವಿರುದ್ಧ FIR, ಐವರು ಅರೆಸ್ಟ್!

For Dai;y Updates Join Our whatsapp Group

Spread the love

ಬೆಂಗಳೂರು:– ATM ನಲ್ಲಿ ಹಣ ತುಂಬದೆಯೇ, ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿದ್ದ ಎಟಿಎಂ ನಿರ್ವಹಣೆ ಕಂಪನಿಯ ಸಿಬ್ಬಂದಿ ವಿರುದ್ಧ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಅಲ್ಲದೇ ಪ್ರಕರಣ ಸಂಬಂಧ ಎಟಿಎಂ ನಿರ್ವಹಣಾ ಕಂಪನಿ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ನ ಸಿಬ್ಬಂದಿಗಳನ್ನು ಬಂಧಿಸಲಾಗಿದೆ.

ಜುಲೈ 6ರಂದು ನಡೆದಿತ್ತು. ಬೆಡ್ ಶೀಟ್ ಸುತ್ತಿಕೊಂಡು ಬಂದಿದ್ದ ಕಳ್ಳರು, ಮೊದಲು ಎಟಿಎಂ ಯಂತ್ರ ಇರುವ ಕೊಠಡಿಯ ಸಿಸಿಟಿವಿ ಕ್ಯಾಮರಾಗಳಿಗೆ ಕಪ್ಪು ಸ್ಪ್ರೇ ಹೊಡೆದು ನಂತರ ಗ್ಯಾಸ್ ಕಟರ್ ಬಳಸಿ ಎಟಿಎಂ ಕ್ಯಾಶ್ ಬಾಕ್ಸ್ ಕತ್ತರಿಸಿ‌ ನಗದು ದೋಚಿ ಪರಾರಿಯಾಗಿದ್ದರು.

ಎಟಿಎಂ ಯಂತ್ರದಲ್ಲಿದ್ದ 16.56 ಲಕ್ಷ ರೂ. ನಗದನ್ನು ದೋಚಿ ಕಳ್ಳರು ಪರಾರಿಯಾಗಿರುವುದಾಗಿ ಬೆಳ್ಳಂದೂರು ಠಾಣೆಗೆ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ ಕಂಪನಿಯ ಪ್ರತಿನಿಧಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಠಾಣಾ ಪೊಲೀಸರು, ತನಿಖೆ ನಡೆಸಿದಾಗ ಕಳ್ಳರು ಎಟಿಎಂ ಯಂತ್ರದಲ್ಲಿದ್ದ ಸುಮಾರು 6,500 ರೂ. ನಗದನ್ನಷ್ಟೇ ಕಳ್ಳತನ ಮಾಡಿರುವುದು ಪತ್ತೆಯಾಗಿತ್ತು. ಅನುಮಾನದ ಹಿನ್ನೆಲೆ ಮತ್ತಷ್ಟು ತನಿಖೆ ಕೈಗೊಂಡಾಗ ಅಸಲಿಗೆ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಸಿಬ್ಬಂದಿಯೇ 16.50 ಲಕ್ಷ ರೂ. ಹಣವನ್ನು ಎಟಿಎಂಗೆ ತುಂಬಿಸಿರಲಿಲ್ಲ. ಆನಂತರ ನಡೆದಿದ್ದ ಕಳ್ಳತನದ ಕೃತ್ಯದ ಲಾಭ ಪಡೆದುಕೊಂಡಿದ್ದ ಎಟಿಎಂ ನಿರ್ವಹಣಾ ಕಂಪನಿ ಸಿಬ್ಬಂದಿ, ಒಟ್ಟು 16.56 ಲಕ್ಷ ರೂ. ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಸುಳ್ಳು ಪ್ರಕರಣ ದಾಖಲಿಸಿದ್ದ ಎಟಿಎಂ ನಿರ್ವಹಣಾ ಕಂಪನಿಯ ಪ್ರತಿನಿಧಿ ವಿರುದ್ಧವೇ ಸದ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಐವರನ್ನ ಬಂಧಿಸಲಾಗಿದೆ. ಮೂಲ ಪ್ರಕರಣದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!