ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ಯೂಟ್ಯೂಬರ್‌ಗಳಿಗೆ ಥಳಿತ, ಸಿಡಿದೆದ್ದ ಭಕ್ತರು!

0
Spread the love

ಮಂಗಳೂರು:- ಕಳೆದ ಕೆಲವು ತಿಂಗಳುಗಳಿಂದ ಧರ್ಮಸ್ಥಳದ ವಿಚಾರ ದೇಶದಾದ್ಯಂತ ಸದ್ದು ಮಾಡುತ್ತಿದೆ.

Advertisement

ಸಾಲು ಸಾಲು ಅಪಪ್ರಚಾರ, ಧರ್ಮಸ್ಥಳದ ಬಗ್ಗೆ ಸುಳ್ಳು ಸುದ್ದಿಗಳನ್ನೇ ಬಿತ್ತರ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಧರ್ಮಸ್ಥಳದ ಭಕ್ತರು ಇದೀಗ ಶ್ರೀಕ್ಷೇತ್ರದಲ್ಲಿಯೇ ಧರ್ಮದೇಟು ನೀಡಿ ಓಡಿಸಿದ್ದಾರೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಅಪಪ್ರಚಾರ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದು ಭಕ್ತಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸಾವಿರಾರು ಸಂಖ್ಯೆಯಲ್ಲಿ ಧರ್ಮಸ್ಥಳದ ಗ್ರಾಮಸ್ಥರು ಧರ್ಮಸ್ಥಳ ಠಾಣೆಗೆ ಮುತ್ತಿಗೆ ಹಾಕಿ ನ್ಯಾಯ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಕ್ಷೇತ್ರ ಬಗ್ಗೆ ಅಪಪ್ರಚಾರ ನಡೆಸಿದ್ದಕ್ಕೆ ಪಾಂಗಳ ಎಂಬಲ್ಲಿ ಮೂವರು ಯೂಟ್ಯೂಬರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಎರಡು ಗುಂಪುಗಳ ಮಧ್ಯೆ ಕಿತ್ತಾಟ ನಡೆಯುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿದ್ದರು. ಈ ಮಧ್ಯೆ ಯಾವಾಗ ಸಾಕ್ಷಿಧಾರ ತೋರಿಸಿದ 6ನೇ ಜಾಗದಲ್ಲಿ ಅಸ್ಥಿ ಸಿಕ್ಕಿತೋ ಆ ನಂತರ ಈ ಅಸ್ಥಿಯ ಬಗ್ಗೆ ಕೆಲ ಯೂಟ್ಯೂಬ್‌ ವಾಹಿನಿಗಳು ಸುಳ್ಳು ಸುದ್ದಿಗಳನ್ನು ಪ್ರಚಾರ ನಡೆಸಲು ಆರಂಭಿಸಿದವು.

ರಾಜ್ಯಮಟ್ಟದ ಮಾಧ್ಯಮಗಳಲ್ಲಿ ತನಿಖೆಗೆ ಸಂಬಂಧಿಸಿದ ಸುದ್ದಿಗಳು ಮಾತ್ರ ಬರುತ್ತಿದ್ದರೆ ಯೂಟ್ಯೂಬ್‌ ವಾಹಿನಿಗಳಲ್ಲಿ ಅದಕ್ಕೆ ವಿರುದ್ಧವಾದ ಸುದ್ದಿಗಳು ಪ್ರಕಟವಾಗುತ್ತಿದ್ದವು. ಅಷ್ಟೇ ಅಲ್ಲದೇ ಕ್ಷೇತ್ರದ ಬಗ್ಗೆ ಅವಹೇಳನ ಮಾಡಿ ಸುದ್ದಿ ಪ್ರಕಟವಾಗುತ್ತಿತ್ತು. ಇದು ಗೊಂದಲಕ್ಕೆ ಕಾರಣವಾಗುತ್ತಿದ್ದವು. ನಿರಂತರ ದೇವಸ್ಥಾನ, ವೀರೇಂದ್ರ ಹೆಗ್ಗಡೆ ಕುಟುಂಬದ ತೇಜೋವಧೆ, ಗ್ರಾಮಸ್ಥರ ಬಗ್ಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಇಂದು ಭಕ್ತರು ಸಿಡಿದು ನಿಂತಿದ್ದಾರೆ.

ಧರ್ಮಸ್ಥಳ ಕ್ಷೇತ್ರದ ಬಗ್ಗೆ ಕಳೆದ 13 ವರ್ಷಗಳಿಂದ ಅಪಪ್ರಚಾರ ನಡೆಯುತ್ತಿದೆ. ಈ ಅಪಪ್ರಚಾರಕ್ಕೆ ಮೂಲ ಕಾರಣರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣನವರ್‌ ಕಾರಣ. ಇವರನ್ನು ಕೂಡಲೇ ಬಂಧಿಸಬೇಕು. ಸಮೀರ್‌ ಎಂಬಾತ ಯಾವುದೇ ಸಾಕ್ಷ್ಯ ಇಲ್ಲದೇ ಸುಳ್ಳು ವಿಡಿಯೋ ಮಾಡಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ.

ಹೀಗಾಗಿ ಇವರ ಜೊತೆ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಯೂಟ್ಯೂಬರ್ಸ್‌ ವಿರುದ್ಧ ಕ್ರಮಕೈಗೊಳ್ಳಬೇಕು. ದಕ್ಷಿಣ ಕನ್ನಡ ಎಸ್‌ಪಿ, ಎಸ್‌ಐಟಿ ತಂಡ ಬರುವವರೆಗೂ ನಾವು ಸ್ಥಳದಿಂದ ಕದಲುವುದಿಲ್ಲ ಎಂದು ಕ್ಷೇತ್ರದ ಭಕ್ತರು ಈಗ ಧರ್ಮಸ್ಥಳ ಠಾಣೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here