ಆನೇಕಲ್: ಕೌಟುಂಬಿಕ ಕಲಹ ಹಿನ್ನೆಲೆ ಕೀಟನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಎಎಸ್ಬಿ ಕಾಲೇಜು ಕ್ರೀಡಾಂಗಣದ ಬಳಿ ನಡೆದಿದೆ. ಮಂಜುನಾಥ್ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು,
Advertisement
ಆನೇಕಲ್ ಪಟ್ಟಣದ ಬಹದ್ದೂರ್ ಪುರ ನಿವಾಸಿಯಾಗಿರುವ ಮಂಜುನಾಥ್, ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಸ್ಥಳೀಯರು ಆನೇಕಲ್ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೊರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಆಸ್ಪತ್ರೆಗೆ ಆನೇಕಲ್ ಪೊಲೀಸರು ಭೇಟಿ ನೀಡಿದ್ದಾರೆ.