ಬಳ್ಳಾರಿ:- ಜಿಲ್ಲೆಯ ಸಿರಗುಪ್ಪ ತಾಲೂಕಿನ ದೊಡ್ಡ ರಾಜ್ ಕ್ಯಾಂಪ್‌ನಲ್ಲಿ ಕೌಟುಂಬಿಕ ಕಲಹದಿಂದಾಗಿ ಪತಿ-ಪತ್ನಿ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ.
24 ವರ್ಷದ ಪತಿ ಅಂಬರೀಶ್, 20 ವರ್ಷದ ಪತ್ನಿ ಶೃತಿ ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲೆ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಬರೀಶ್ ಹಾಗೂ ಶೃತಿ ಒಂದು ವರ್ಷದ ಹಿಂದಷ್ಟೇ ಮದ್ವೆ ಆಗಿದ್ರು. ಇಬ್ಬರ ಮಧ್ಯೆ ಜಗಳವಾಗಿತ್ತು ಎನ್ನಲಾಗಿದೆ. ಈ ವೇಳೆ ದುಡುಕು ನಿರ್ಧಾರ ತೆಗೆದುಕೊಂಡು ಪ್ರಾಣವನ್ನೇ ಬಿಟ್ಟಿದ್ದಾರೆ.
ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.



