ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನಲೆ ಪತಿಯೊಬ್ಬ ಪತ್ನಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ. ತನು (25) ಕೊಲೆಯಾದ ಮಹಿಳೆಯಾಗಿದ್ದು, ರಮೇಶ್ ಕೊಲೆಗೈದ ಪತಿಯಾಗಿದ್ದಾನೆ.
Advertisement
ತನು & ರಮೇಶ್ 7 ವರ್ಷಗಳ ಹಿಂದೆ ಮದ್ವೆಯಾಗಿದ್ದರು. ದಂಪತಿಗೆ 6 ವರ್ಷದ ಗಂಡು ಮಗು ಇದೆ. ಗಂಡನೊಂದಿಗೆ ಜಗಳ ಮಾಡಿಕೊಂಡಿದ್ದ ತನು 2 ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದಳು. ಹೀಗಾಗಿ ಇಬ್ಬರ ನಡುವೆ ಕಲ ಇತ್ತು. ಬುಧವಾರ ರಾತ್ರಿ ಕುಡಿದು ಬಂದಿದ್ದ ರಮೇಶ್,
ಪತ್ನಿಯನ್ನ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಮನೆಯ ರೂಮಿನ ತುಂಬೆಲ್ಲ ರಕ್ತ ಚೆಲ್ಲಿದ್ದು, ರಕ್ತದ ಮಡುವಿನಲ್ಲಿ ಪತ್ನಿಯ ಶವ ಪತ್ತೆಯಾಗಿದೆ. ಇನ್ನೂ ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.