ಹಾರೋಹಳ್ಳಿ:- ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳಿಗೆ ವಿಷ ಹಾಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಚಿಕ್ಕ ಸಾದೇನಹಳ್ಳಿ ಗ್ರಾಮದಲ್ಲಿ ಜರುಗಿದೆ.
Advertisement
ಅಶ್ವಥ್(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅಶ್ವಥ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಇಬ್ಬರು ಗಂಡು ಮಕ್ಕಳಿಗೆ ವಿಷ ಕೊಟ್ಟಿದ್ದ. ಅಕ್ಕಪಕ್ಕದ ಮನೆಯವರು ಗಮನಿಸಿ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇದರಲ್ಲಿ ಒಬ್ಬ ಮಗ ಅರೋಗ್ಯವಾಗಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಮೃತ ವ್ಯಕ್ತಿ ಮಾರಣೋತ್ತರ ಪರೀಕ್ಷೆ ನಡೆದಿದ್ದು, ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


