ಕೊಲ್ಕತ್ತಾ:- ಕೌಟುಂಬಿಕ ಕಲಹ ಹಿನ್ನೆಲೆ ಅತ್ತಿಗೆಯ ರುಂಡ ಕತ್ತರಿಸಿ ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಬಸಂತಿ ಪಟ್ಟಣದಲ್ಲಿ ಜರುಗಿದೆ. ಆರೋಪಿಯನ್ನು ಬಿಮಲ್ ಮಂಡಲ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಬಿಮಲ್ ಮಂಡಲ್ ತನ್ನ ಅತ್ತಿಗೆಯ ಕತ್ತರಿಸಿದ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದರು. ಕೂಡಲೇ ಪೊಲೀಸರು ಆತನನ್ನು ಬಂಧಿಸಿದರು. ಕೌಟುಂಬಿಕ ಕಲಹದಿಂದಾಗಿ ಈ ಭೀಕರ ಹತ್ಯೆ ನಡೆದಿದೆ ಎನ್ನಲಾಗಿದೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಯಿಂದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.



