ಕೌಟುಂಬಿಕ ಕಲಹ: ಕೆರೆಗೆ ಹಾರಿ ಪ್ರಾಣಬಿಟ್ಟ ತಾಯಿ, ಮಗ!

0
Spread the love

ಹಾಸನ:- ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಕೌಟುಂಬಿಕ ಕಲಹದಿಂದ ಈ ದುಡುಕು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Advertisement

60 ವರ್ಷದ ಜಯಂತಿ, 35 ವರ್ಷದ ಭರತ್ ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು.

ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here