ಕಲಬುರ್ಗಿ:- ಕೌಟುಂಬಿಕ ಕಲಹ ಹಿನ್ನೆಲೆ ದುಷ್ಕರ್ಮಿಗಳು ಮಹಿಳೆ ಹತ್ಯೆಗೈದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಘಟನೆ ಜರುಗಿದೆ.
Advertisement
ತಾಲೂಕಿನ ಇಟಗಾ ಗ್ರಾಮದ ಬಳಿ ಘಟನೆ ನಡೆದಿದೆ. 29 ವರ್ಷದ ಜ್ಯೋತಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಜ್ಯೋತಿಗೆ ಕಳೆದ 10 ವರ್ಷದ ಹಿಂದೆ ಮದುವೆ ಆಗಿತ್ತು. ಈಕೆ 5 ವರ್ಷದಿಂದ ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ.
ನಿನ್ನೆ ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಜ್ಯೋತಿ, ಮಧ್ಯಾಹ್ನ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.