ಸಿನಿಮಾರಂಗದಲ್ಲಿ ಅಪಾರ ಸಾಧನೆ ಮಾಡಿದ ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು, ಹಿರಿಯ ನಟನಿಗೆ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ.
ಹಲವು ವರ್ಷಗಳಿಂದ ಅನಂತ್ ನಾಗ್‌ಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂದು ಕನ್ನಡಿಗರು ಆಶಿಸಿದ್ದರು. ಇದೀಗ ಹಿರಿಯ ನಟನಿಗೆ ಸಿಕ್ಕಿರುವ ಪ್ರಶಸ್ತಿಗೆ ಅಭಿಮಾನಿಗಳು ಶುಭಹಾರೈಸಿದ್ದಾರೆ. ರಂಗಭೂಮಿಯಲ್ಲೂ ನಟಿಸಿ ಸೈ ಎನಿಸಿಕೊಂಡಿರುವ ಅನಂತ್ ನಾಗ್, ಅನಂತ್ ನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ 300ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ.



