Homecinemaಖ್ಯಾತ ಗಾಯಕ ಸೋನು ನಿಗಂಗೆ ಸಂಕಷ್ಟ: ಬೆಂಗಳೂರಿನಲ್ಲಿ ದೂರು ದಾಖಲು - ಯಾಕೆ?

ಖ್ಯಾತ ಗಾಯಕ ಸೋನು ನಿಗಂಗೆ ಸಂಕಷ್ಟ: ಬೆಂಗಳೂರಿನಲ್ಲಿ ದೂರು ದಾಖಲು – ಯಾಕೆ?

For Dai;y Updates Join Our whatsapp Group

Spread the love

ಬೆಂಗಳೂರು:- ಭಾರತದ ಖ್ಯಾತ ಗಾಯಕ ಸೋನು ನಿಗಂಗೆ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ ಕನ್ನಡಿಗರ ಕನ್ನಡ ಪ್ರೀತಿಯನ್ನು ಭಯೋತ್ಪಾದನೆಗೆ ಹೋಲಿಸಿದ ಹಿನ್ನೆಲೆ ಈ ದೂರು ದಾಖಲಾಗಿದೆ. ಸೋನು ನಿಗಂ ಅವರ ಮತಿಹೀನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ದೂರು ದಾಖಲಿಸಿವೆ. ಕನ್ನಡ ಚಿತ್ರರಂಗ ಸೋನು ನಿಗಂ ಅವರನ್ನು ನಿಷೇಧಿಸಬೇಕೆಂದು ಸಹ ಒತ್ತಾಯಿಸಲಾಗಿದೆ.

ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಸದಸ್ಯರು ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದಕತೆಗೆ ಹೋಲಿಸಿದ ಸೋನು ನಿಗಂ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ವಿವಾದದ ಬಗ್ಗೆ ಮಾತನಾಡಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರು, ‘ಸೋನು ನಿಗಂ ಒಬ್ಬ ಸಾಂಸ್ಕೃತಿಕ ಭಯೋತ್ಪಾದಕ. ಸೋನು ನಿಗಮ್ ಕನ್ನಡದಿಂದ ಬ್ಯಾನ್ ಮಾಡಬೇಕು, ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸುತ್ತಾನಾ? ಸೋನು ನಿಗಂ ಈ ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು, ಇಲ್ಲವಾದರೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ, ಸೋನು ನಿಗಂ ಮೇಲೆ ನಿಷೇಧ ಹೇರಬೇಕು ಎಂದು ಕನ್ನಡ‌ ಚಲನಚಿತ್ರ ಮಂಡಳಿ, ನಿರ್ಮಾಪಕ ಸಂಘಕ್ಕೆ ಆಗ್ರಹಿಸುತ್ತೇನೆ’ ಎಂದಿದ್ದಾರೆ.

ಸೋನು ನಿಗಮ್ ಹೇಳಿದ್ದೇನು?

ಇತ್ತೀಚೆಗೆ ಬೆಂಗಳೂರಿನ ಕಾಲೇಜೊಂದರಲ್ಲಿ ಸೋನು ನಿಗಂ ಲೈವ್ ಗಾಯನಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ ಆಗ ಮಾತನಾಡಿದ ಸೋನು ನಿಗಂ, ‘ಕನ್ನಡ, ಕನ್ನಡ.. ಇದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು’ ಎಂದು, ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದರು. ಸೋನು ನಿಗಂ ಅವರ ಈ ಹೇಳಿಕೆಗೆ ಕನ್ನಡಿಗರ ಒಕ್ಕೂರಲ ಆಕ್ರೋಶ ವ್ಯಕ್ತವಾಗಿದೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!