ಸುದೀಪ್ ನಾಯಕ ನಟನಾಗಿ ನಟಿಸಿರುವ ಮ್ಯಾಕ್ಸ್ ಸಿನಿಮಾ ಡಿಸೆಂಬರ್ 25 ರಂದು ರಾಜ್ಯದಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲೆಡೆ ಸಿನಿಮಾಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸುದೀಪ್ ಜೊತೆಗೆ ಇಡೀ ಟೀಂ ಫುಲ್ ಖುಷಿ ಮೂಡ್ನಲ್ಲಿದೆ. ಸಿನಿಮಾದ ಯಶಸ್ಸಿನ ಬೆನ್ನಲ್ಲಿಯೇ ಸುದೀಪ್ ಮನೆಯಲ್ಲಿ ಸೆಲೆಬ್ರೇಷನ್ ಮಾಡಿದ್ದಾರೆ. ಕೇಕ್ ಕಟ್ ಮಾಡಿ ಖುಷಿ ಹಂಚಿಕೊಂಡಿದ್ದಾರೆ.
ನಿನ್ನೆಯಷ್ಟೇ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಬಿಡುಗಡೆಯಾಗಿದೆ. ಸಿನಿಮಾ ನೋಡಿ ಆಚೆ ಬಂದ ಪ್ರೇಕ್ಷಕರು ಸಿನಿಮಾವನ್ನು ಹಾಡಿ ಹೊಗಳುತ್ತಿದ್ದಾರೆ. ರಾಜ್ಯಾದ್ಯಂತ ಭಾರೀ ರೆಸ್ಪಾನ್ಸ್ ಕೇಳಿ ಬರುತ್ತಿದೆ. ಬಹುತೇಕ ರಾಜ್ಯದ ಎಲ್ಲಾ ಥಿಯೇಟರ್ಗಳು ಹೌಸ್ಫುಲ್ ಆಗಿ ಓಡುತ್ತಿವೆ. ಇದೇ ಖುಷಿಯಲ್ಲಿ ನಟ ಸುದೀಪ್ ಮ್ಯಾಕ್ಸ್ ಟೀಂಗೆ ಔತಣಕೂಟ ಏರ್ಪಡಿಸಿ ಪಾರ್ಟಿ ಕೊಟ್ಟಿದ್ದಾರೆ.
ಇನ್ನು ಕೇಕ್ನಲ್ಲಿ ಬಾಸಿಸಂ ಕಾಲ ಮುಗೀತು ಮಾಕ್ಸಿಮಮ್ ಕಾಲ ಶುರುವಾಯ್ತು ಎಂದು ಬರೆದು ಸಂಭ್ರಮಿಸಿದ್ದಾರೆ. ಎರಡೂವರೆ ವರ್ಷಗಳ ಬಳಿಕ ಸುದೀಪ್ ಸಿನಿಮಾ ರಿಲೀಸ್ ಆಗಿದೆ. ಹೀಗಾಗಿ ಅಭಿಮಾನಿಗಳಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆಗಳಿದ್ದವು. ಆ ನಿರೀಕ್ಷೆಗಳನ್ನು ಸಿನಿಮಾ ಹುಸಿಗೊಳಿಸಿಲ್ಲ. ಸಿನಿಮಾ ನೋಡಿ ಆಚೆ ಬಂದ ಪ್ರತಿಯೊಬ್ಬರು ಸಿನಿಮಾ ಅದ್ಭುತವಾಗಿದೆ ಎಂದೇ ಹೇಳುತ್ತಲಿದ್ದಾರೆ.
ಮ್ಯಾಕ್ಸ್ ಚಿತ್ರದಲ್ಲಿ ಸುದೀಪ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ರಾತ್ರಿಯಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.