ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹರಪನಹಳ್ಳಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಮವಸ್ತ್ರ ವಿತರಿಸಿ ಮಾತನಾಡಿದ ಶಾಸಕಿ ಲತಾ ಮಲ್ಲಿಕಾರ್ಜುನ, ಹರಪನಹಳ್ಳಿ ನೌಕರರ ಸಂಘ ಸಾಮಾಜಿಕವಾಗಿ ಉತ್ತಮ ಕಾರ್ಯ ಮಾಡುತ್ತಿದೆ. ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಹರಪನಹಳ್ಳಿ ನೌಕರರಿಗೆ ಶುಭವಾಗಲಿ ಎಂದು ಹಾರೈಸಿದರು.
ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಪದ್ಮಲತಾ ಮಾತನಾಡಿದರು. ಪ್ರಾಸ್ತಾವಿಕವಾಗಿ ಬಸವರಾಜ ಸಂಗಪ್ಪನವರ್ ಮಾತನಾಡಿ, ವಿಜಯನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ರೀಡಾಪಟುಗಳು ನಮ್ಮ ಹರಪನಹಳ್ಳಿ ತಾಲೂಕಿನ ನೌಕರರು ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದರು.
ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎಸ್.ರಾಮಪ್ಪ ಕ್ರೀಡಾಪಟು ನೌಕರರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ನೌಕರರ ಸಂಘದ ಕಾರ್ಯದರ್ಶಿ ವೆಂಕಟೇಶ ಬಾಗಲಾರ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಜಶೇಖರ, ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ. ಚಂದ್ರಮೌಳಿ, ಪದ್ಮರಾಜ ಜೈನ್, ಅರ್ಜುನ್ ಪರಸಪ್ಪ, ಉಸ್ಮಾನ್, ಎಂ. ಷರೀಪ್ ಸಾಹೇಬ್, ಪಿ. ಸುಬ್ಬಣ್ಣ ಭಾಗವಹಿಸಿದ್ದರು.