ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ವೈ.ಎಸ್. ಭಿಕ್ಷಾವರ್ತಿಮಠ, ಎಸ್.ಕೆ. ತಪ್ಪಲದ, ಎಂ.ಎಂ. ಶೀಗಿಹಳ್ಳಿ, ವಿಜಯ ಚವ್ಹಾಣ, ಆರ್.ಪಿ. ಮಾಳೊತ್ತರ, ಲೋಕೇಶ ಲಮಾಣಿ ಅವರನ್ನು ಶುಕ್ರವಾರ ಸನ್ಮಾನಿಸಿ ಬೀಳ್ಕೊಡಲಾಯಿತು.
ಪಿಎಸ್‌ಐ ನಾಗರಾಜ ಗಡಾದ ಮಾತನಾಡಿ, ಲಕ್ಷ್ಮೇಶ್ವರ ಠಾಣೆಯಲ್ಲಿ ಸಿಬ್ಬಂದಿಗಳ ಸಹಕಾರದಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದೆ. ಈಗ ವರ್ಗಾವಣೆಗೊಂಡಿರುವ ಸಿಬ್ಬಂದಿಗಳ ಸೇವೆ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಅವರು ಬೇರೆ ಬೇರೆ ಠಾಣೆಗಳಲ್ಲಿ ಇದೇ ರೀತಿಯ ಸೇವೆ ಸಲ್ಲಿಸಿ ಇಲಾಖೆಗೆ ಒಳ್ಳೆಯ ಹೆಸರು ತರಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಿಪಿಐ ನಾಗರಾಜ ಮಾಡಳ್ಳಿ ಮಾತನಾಡಿ, ಪೊಲೀಸರ ವೈಯಕ್ತಿಕ ಬದುಕಿಗಿಂತ ಇಲಾಖೆಯ ಕೆಲಸವೂ ಅಷ್ಟೇ ಮುಖ್ಯ. ಪೊಲೀಸರು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಸಾರ್ವಜನಿಕರು ನಮ್ಮ ಮೇಲೆ ನಂಬಿಕೆ, ವಿಶ್ವಾಸ ಇಟ್ಟಿರುತ್ತಾರೆ. ನಾವು ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಅವರ ವಿಶ್ವಾಸ ಉಳಿಸಿಕೊಳ್ಳಬೇಕು. ತಾಲೂಕಿನಲ್ಲಿ ಅಪರಾಧ ಚಟುವಟಕೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಜನರು ಪೊಲೀಸರೊಂದಿಗೆ ಸಹಕರಿಸಿ ಅಪರಾಧಗಳ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದರು.
ಸವಣೂರು ಪುರಸಭೆಯ ಕಂದಾಯ ನಿರೀಕ್ಷಕ ಮಹೇಶ ಹಡಪದ, ಲಕ್ಷ್ಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ರೈಮ್ ಪಿಎಸ್‌ಐ ಟಿ.ಕೆ. ರಾಠೋಡ ಹಾಗೂ ಠಾಣೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪಾಂಡುರAಗರಾವ್, ಎಚ್.ಬಿ. ಕಲ್ಲಣ್ಣವರ, ಡಿ.ಎಸ್. ನದಾಫ್ ಅವರನ್ನು ಸನ್ಮಾನಿಸಲಾಯಿತು.


