ತುಮಕೂರು: ನೀರಲ್ಲಿ ಸೋಡಿಯಂ ಸ್ಪೋಟ ಕೇಸ್ ಗೆ ಸಂಬಧಪಟ್ಟಂತೆ ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಆದ್ರೆ ಇದೀಗ ಮತ್ತೆ ಡ್ರೋನ್ ಪ್ರತಾಪ್ ಶಾಕ್ ಆಗಿದೆ. ಡ್ರೋನ್ ಪ್ರತಾಪ್ ಅವರನ್ನು ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
Advertisement
ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ ಪೊಲೀಸರು ಅವರನ್ನು ಮಧುಗಿರಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ನಲ್ಲಿ ಹತ್ತು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ಕೋರ್ಟ್ ಆದೇಶ ನೀಡಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಾಪ್‌ನ ಇಬ್ಬರು ಸ್ನೇಹಿತರನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ. ಕ್ಯಾಮೇರಾ ಮ್ಯಾನ್ ವಿನಯ್, ಹಾಗೂ ಸೋಡಿಯೋಂ ಕೊಡಿಸಿದ್ದ ಪ್ರಜ್ವಲ್ ಸಧ್ಯ ಅರೆಸ್ಟ್ ಆಗಿದ್ದಾರೆ. ಸದ್ಯ ಡ್ರೋನ್ ಪ್ರತಾಪ್ ಮೇಲೆ 2023ರ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 288ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.