ಮಂಡ್ಯ :- ಜಿಲ್ಲೆಯ ಎಸ್‌ಐ ಕೋಡಿಹಳ್ಳಿ ಗ್ರಾಮದ ಜಮೀನೊಂದರಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿರುವ ಘಟನೆ ಜರುಗಿದೆ.
ರೈತ ಶಿವಣ್ಣಗೌಡ (55) ಮೃತ ರೈತ. ಅವರು ತಮ್ಮ ಜಮೀನಿನಲ್ಲಿ ಇಪ್ಪನೇರಳೆ ಕಟ್ಟಿಗೆ ಉಳುಮೆ ಮಾಡುವ ವೇಳೆ ಈ ದುರಂತ ಸಂಭವಿಸಿದೆ. ಶಿವಣ್ಣಗೌಡ ರೇಷ್ಮೆ ಬೆಳೆದುಕೊಂಡು ಜೀವನ ಮಾಡುತ್ತಿದ್ದರು. ಕುಟುಂಬಕ್ಕೆ ಆಸರೆಯಾಗಿದ್ದ ಶಿವಣ್ಣರ ಸಾವು ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣವು ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದೆ.



