HomeUncategorizedಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಒತ್ತಾಯ

ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಒತ್ತಾಯ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ನಷ್ಟಕ್ಕೊಳಗಾದ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಹೋರಾಟ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಗೌಡ ಜಾಯನಗೌಡ್ರ ಎಚ್ಚರಿಕೆ ನೀಡಿದರು.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ಮನವಿ ಸಲ್ಲಿಸಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಹಲವು ಕಡೆ ಮಳೆಮಾಪನ ಯಂತ್ರಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಮಳೆಯ ನಿಖರ ಅಂಕಿಅಂಶಗಳು ಲಭ್ಯವಾಗದೇ ವಾಸ್ತವ ಪರಿಸ್ಥಿತಿ ಸರ್ಕಾರದ ಗಮನಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು.

ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು. ರೈತರ ಜಾನುವಾರುಗಳ ರಕ್ಷಣೆಗೆ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು. ಕೆರೆ ತುಂಬಿಸುವ ಯೋಜನೆಯನ್ನು ತಕ್ಷಣ ಸಕ್ರಿಯಗೊಳಿಸಬೇಕು. ಕಳೆದ ವರ್ಷ ತಂತ್ರಾಂಶದ ದೋಷದಿಂದ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ವಿತರಣೆಯಲ್ಲಿ ಅನೇಕ ರೈತರು ವಂಚಿತರಾಗಿದ್ದಾರೆ. ಈ ಬಾರಿ ಅಂತಹ ಸಮಸ್ಯೆ ಮರುಕಳಿಸದಂತೆ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ರವಿ ವಗ್ಗನವರ, ಉಪಾಧ್ಯಕ್ಷ ಗಿರೀಶ ಹೊಸಮನಿ, ಕಾರ್ಯದರ್ಶಿ ಈಶ್ವರ ಬಿ. ಗದಗಿನ, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಸಂಚಾಲಕ ಶರಣಪ್ಪ ಕಮ್ಮಾರ, ಕಾರ್ಯದರ್ಶಿ ರೇವಣಸಿದ್ದಪ್ಪ ಬಿಡನಾಳ ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img