CWRC ಆದೇಶ ಖಂಡಿಸಿ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಪ್ರತಿಭಟನೆ

0
Spread the love

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ತಮಿಳುನಾಡಿಗೆ ನೀರು ಬಿಡಲು ಆದೇಶ ಹಿನ್ನಲೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಆಕ್ರೋಶ‌ ಮತ್ತೆ ಭುಗಿಲೆದ್ದಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಕನ್ನಡ ಸೇನೆ, ಹಾಗೂ ವಿವಿಧ ಸಂಘಟನೆಗಳಿಂದ ಬೆಂ-ಮೈ ಹೆದ್ದಾರಿ ತಡೆದು CWRC ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. CWRC ಆದೇಶದಿಂದ ಕಾವೇರಿ ಹೋರಾಟ ಮತ್ತೆ  ಮುನ್ನೆಲೆಗೆ ಬಂದಿದ್ದು, ರಾಜ್ಯ ಹಾಗೂ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

CWRC ಆದೇಶ ಪಾಲನೆ ಮಾಡದಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಅದಲ್ಲದೆ ನಮಗೆ ಕುಡಿಯುವ ನೀರಿಲ್ಲ, ತಮಿಳುನಾಡಿಗೆ ಮತ್ತೆ ನೀರು ಕೊಡುವುದು ಸರಿಯಲ್ಲ. ತಕ್ಷಣವೇ ಸಂಸದರು ಸಭೆ ಕರೆದು ಧ್ವನಿ ಎತ್ತಬೇಕು. ಸಿಎಂ ಡಿಸಿಎಂ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಕರ್ನಾಟಕಕ್ಕೆ ಅನ್ಯಾಯ ಮಾಡದಂತೆ ಆಗ್ರಹಿಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಂತೆ ಮನವಿ ಮಾಡಿದ್ದು, ಪ್ರತಿಭಟನೆಯಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮಾಜಿ ಪರಿಷತ್ತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಸುನಂದಾ ಜಯರಾಂ, ಸೇರಿ ಹಲವರು ಭಾಗಿಯಾಗಿದ್ದರು.


Spread the love

LEAVE A REPLY

Please enter your comment!
Please enter your name here