HomeBelgaumರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯವನ್ನು ಬೆಳೆಯಬೇಕಿದೆ: ಸಿಎಂ ಸಿದ್ದರಾಮಯ್ಯ

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯವನ್ನು ಬೆಳೆಯಬೇಕಿದೆ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಳಗಾವಿ: ಕೃಷಿ ಇಲಾಖೆ ವತಿಯಿಂದ ಬೆಳಗಾವಿ ಸುವರ್ಣ ಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಸಿರಿಧಾನ್ಯ, ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮ ಅತ್ಯಂತ ಯಶ್ವಸಿಯಾಗಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.. ಆಧುನಿಕ ಜಗತ್ತಿನಲ್ಲಿ ಸಿರಿಧಾನ್ಯ ಹೆಚ್ಚು ಜನಪ್ರಿಯ ಹಾಗು ಲಾಭದಾಯಕವಾಗಿ ರೂಪುಗೊಂಡಿದೆ. ಸರ್ಕಾರ ಕೂಡ ಇದನ್ನು ಪ್ರೋತ್ಸಾಹಿಸುತ್ತಿದೆ.. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಬೆಳೆಯಬೇಕಿದೆ ಎಂದರು..

ಸಿರಿಧಾನ್ಯ ಅತ್ಯಂತ ಆರೋಗ್ಯಪೂರ್ಣ ಆಹಾರವಾಗಿದ್ದು, ನಮ್ಮ ಪೂರ್ವಜರು ಇದನ್ನು ಬೆಳೆಸಿ, ಬಳಸುತ್ತಿದ್ದರು. ಒಂದು ಹಂತದಲ್ಲಿ ಬಹುಸಂಖ್ಯೆ ಜನರಿಂದ ದೂರ ಉಳಿದಿದ್ದ ಸಿರಿಧಾನ್ಯ ಇದೀಗ ಉಳ್ಳವರ ಪಾಲಿಗೂ ಫೆವರೇಟ್ ಆಗಿದೆ ಎಂದರು.. ಅತ್ಯಂತ ಕಡಿಮೆ ನೀರಿನಲ್ಲಿಯೂ ಬೆಳೆಯಬಹುದಾದ ಸಿರಿಧಾನ್ಯ ಆರ್ಥಿಕವಾಗಿಯೂ ವರದಾನವಾಗಬಲ್ಲದು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, 2017 ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಸಿರಿಧಾನ್ಯ ಮೇಳಕ್ಕೆ ನೀಡಿದ ಪ್ರೋತ್ಸಾಹ ಹಾಗು ಅದಕ್ಕೆ ರಾಷ್ಟ್ರ ಮಟ್ಟದಲ್ಲಿ ಸಿಕ್ಕ ಮನ್ನಣೆ ಸ್ಮರಿಸಿದರು…

ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ನುಡಿ ಆಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು 2024 ರ ಜನವರಿ 5 ರಿಂದ 7 ರವರೆಗೆ ಬೆಂಗಳೂರಿನ ಆರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತರಾಷ್ಟ್ರೀಯ ಸಾವಯವ ಹಾಗು ಸಿರಿಧಾನ್ಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಇಂದಿನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು..

ಅಂತರಾಷ್ಟ್ರೀಯ ಸಿರಿಧಾನ್ಯ ಮೇಳದಲ್ಲಿ ಹಲವರು ವಿದೇಶಿ ಪಾಲುದಾರರು ಭಾಗವಹಿಸುತ್ತಾರೆ. 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ರೈತರು, ಗ್ರಾಹಕರು ಭಾಗವಹಿಸುವ ನಿರೀಕ್ಷೆ ಇದೆ.. ಸಿರಿಧಾನ್ಯ ಮಾರಾಟ ಹಾಗು ಪ್ರದರ್ಶನದ ನೂರಾರು ಮಳಿಗೆಗಳನ್ನು ತೆರೆಯಲಾಗುವುದು. ಸಾರ್ವಜನಿಕರು ಇದರಲ್ಲಿ ಭಾಗವಹಿಸುವಂತೆ ಈ ಮೂಲಕ ಮನವಿ ಮಾಡಲಾಗುವುದು ಎಂದರು..


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!