ಬೆಂಗಳೂರು:- ರಾಜ್ಯ ಬಿಜೆಪಿ ನಾಯಕರ ಮರಳು ಮಾತುಗಳಿಗೆ ರೈತರು ಬಲಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಉತ್ಪನ್ನಕ್ಕೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ. ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿಜೆಪಿ ನಾಯಕರ ಮರಳು ಮಾತುಗಳಿಗೆ ಬಲಿಯಾಗಬಾರದು.
ಸಂಬಂಧಪಟ್ಟ ಸಚಿವರಾದ ಪ್ರಹ್ಲಾದ್ ಜೋಶಿಯವರು ಏಕೆ ರೈತರ ಪ್ರತಿಭಟನಾ ಸಭೆಗೆ ಹೋಗಿಲ್ಲ. ಸಕ್ಕರೆ ರಫ್ತು ನಿಯಮದಲ್ಲಿ ಕೇಂದ್ರದ ನೀತಿ ಮತ್ತು ಎಫ್‌ಆರ್‌ಪಿ ನಿಗದಿಯಲ್ಲಿ ಕೇಂದ್ರದ ತೀರ್ಮಾನದಿಂದ ಆಗಿರುವ ಅನಾಹುತದ ಕುರಿತು ಪ್ರಧಾನಿ ಜೊತೆ ಚರ್ಚಿಸಲು ಸಂಪುಟದಲ್ಲಿ ನಿರ್ಣಯಿಸಲಾಗಿದೆ ಎಂದರು.
ಇನ್ನೂ ಕಬ್ಬು ಬೆಳೆಗಾರರ ಆಕ್ರೋಶ ಇನ್ನೂ ತಣ್ಣಗಾಗಿಲ್ಲ. ಸರ್ಕಾರ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಲೇ ಬೇಕು, ನಮ್ಮ ಸಮಸ್ಯೆ ಬಗೆ ಹರಿಸಲೇಬೇಕು ಅಂತ ಪಟ್ಟು ಹಿಡಿದಿರುವ ರೈತರು ಸಿಡಿದೆದ್ದಿದ್ದಾರೆ. ಹಸಿರು ಶಾಲು ಬೀಸುತ್ತಾ, ಬಾರು ಕೋಲಿನಲ್ಲಿ ಹೊಡೆಯುತ್ತಾ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ.


