HomeGadag Newsನೋಂದಣಿ ಪ್ರಕ್ರಿಯೆಯಲ್ಲಿ ರೈತರು ಪಾಲ್ಗೊಳ್ಳಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ 

ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಪಾಲ್ಗೊಳ್ಳಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ 

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಭತ್ತ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಬುಧವಾರ 2025-26ನೇ ಸಾಲಿನ ಮುಂಗಾರು ಹಂಗಾಮಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಉತ್ಪತ್ತಿಗೆ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು. ಜಿಲ್ಲೆಯ ಪ್ರತಿ ರೈತರಿಂದ ಎಕರೆಗೆ 25 ಕ್ವಿಂಟಲ್‌ನಮಟ್ಟಿಗೆ ಗರಿಷ್ಠ 50 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಭತ್ತ ಖರೀದಿಸಲು ಹಾಗೂ ಭತ್ತ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಭತ್ತ ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಸರ್ಕಾರ ಬೆಂಬಲ ಬೆಲೆಯಲ್ಲಿ ಭತ್ತ ಉತ್ಪತ್ತಿಯ ಖರೀದಿ ಕುರಿತು ರೈತರಿಗೆ ತಿಳುವಳಿಕೆ ನೀಡಲು ಕರಪತ್ರಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ರೈತರಿಂದ ಭತ್ತ ಉತ್ಪನ್ನ ನೋಂದಣಿಗೆ ಅಕ್ಟೋಬರ್ 31ರವರೆಗೆ ಹಾಗೂ ಖರೀದಿ ಕಾರ್ಯಕ್ಕೆ 1-11-2025ರಿಂದ 28-2-2026ರವರೆಗೆ ಅವಧಿಯನ್ನು ನಿಗದಿಪಡಿಸಲಾಗಿದೆ. ಖರೀದಿಗೆ ಸಂಬಂಧಿಸಿದಂತೆ ನಿಗದಿಪಡಿಸಿದ ಖರೀದಿ ಏಜೆನ್ಸಿಯವರು ನೋಂದಣಿ ಕೇಂದ್ರ ತೆರೆದು ನೋಂದಣಿ ಕಾರ್ಯವನ್ನು ಕೈಗೊಳ್ಳುವ ಬಗ್ಗೆ ಅಗತ್ಯ ಕ್ರಮ ವಹಿಸಲು ಸೂಚಿಸಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ರಮೇಶ್ ಮಾತನಾಡಿ, ಎಫ್.ಎ.ಕ್ಯೂ ಗುಣಮಟ್ಟದ ಭತ್ತ ಉತ್ಪತ್ತಿಗೆ ಪ್ರತಿ ಕ್ವಿಂಟಾಲ್‌ಗೆ ಭತ್ತ ಸಾಮಾನ್ಯ 2369/-ರೂ ಹಾಗೂ ಭತ್ತ ಗ್ರೇಡ್-ಎ 2389ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದನ್ವಯ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ KSWC / PACS / FCS / SKS / TCS ಖರೀದಿಸಲು ಅನುಮೋದನೆ ನೀಡಿದೆ ಎಂದು ತಿಳಿಸಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!