ಮಂಗಳೂರು:- ಕೆಸಿ ರೋಡ್‌ನಿಂದ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಆರು ಜನರು ಸಾವನ್ನಪ್ಪಿರುವ ಘಟನೆ ಕರ್ನಾಟಕ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ನ ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ.
ಅದಲ್ಲದೆ ಬಸ್ಸು ಇದ್ದಕಿದ್ದಂತೆ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಈ ದುರ್ಘಟನೆಯಲ್ಲಿ ಆಟೋ ಚಾಲಕ, ಒಂದು ಮಗು, ಬಾಲಕಿ, ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಆಟೋ ಚಾಲಕ ಹೈದರ್ (47), ಅವಮ್ಮಾ (72), ಖದೀಜಾ (60), ಹಸ್ನಾ(11), ನಫೀಸಾ (52), ಆಯಿಷಾ ಫಿದಾ (19) ಮೃತರಾಗಿದ್ದು, ಲಕ್ಷ್ಮಿ (61), ಸುರೇಂದ್ರ (39) ಗಾಯಾಳಾಗಿದ್ದಾರೆ.
ಕೇರಳದ ಕಾಸರಗೋಡು ಕಡೆಯಿಂದ ಮಂಗಳೂರು ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಆಟೋ ರಿಕ್ಷಾದ ಹಿಂಬದಿಗೆ ಡಿಕ್ಕಿ ಹೊಡೆದು ದುರುಂತ ಸಂಭವಿಸಿದೆ. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.