ಮಹಾರಾಷ್ಟ್ರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ 7 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್’ನಲ್ಲಿ ನಡೆದಿದೆ.
ಕಾರಿನಲ್ಲಿದ್ದವರು ನಾಸಿಕ್ ನಗರದಲ್ಲಿ ಸಂಬಂಧಿಕರೊಬ್ಬರ ಮಗನ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದರು. ಈ ವೇಳೆ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಬಳಿಕ ಪಕ್ಕದಲ್ಲಿದ್ದ ಸಣ್ಣ ಕಾಲುವೆಗೆ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 7 ಮಂದಿ ಸಾವಿಗೀಡಾಗಿದ್ದಾರೆ. ಬೈಕ್ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.



