ಚಿತ್ರದುರ್ಗ: ಇನ್ನೋವಾ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಸುನೀತಾ(34), ಶ್ಯಾಂ ಬಾಬು(17), ಶಿವನಾಗಲಿ(55) ಮೃತ ದುರ್ಧೈವಿಗಳಾಗಿದ್ದು,
Advertisement
ಮೃತರನ್ನು ಆಂಧ್ರಪ್ರದೇಶದ ಗುಂಟೂರಿನ ವೆಂಕಟಪುರಂ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದಿಂದ ಶಿವಮೊಗ್ಗಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ.
ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ, ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.