ಬಾಗಲಕೋಟೆ: ಇನ್ನೋವಾ ಕಾರು ಮತ್ತು ಟಂಟಂ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಮೃತ ದುರ್ದೈವಿಗಳಾಗಿದ್ದು,
ಊಟಕ್ಕೆಂದು ಸಮೀಪದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ತೆರಳಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ಬಾಗಲಕೋಟೆ ಕಡೆಗೆ ವಾಪಸ್ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.
ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ, ಗುರುಪ್ರಸಾದ್ ಸುಂಕದ ಗಾಯಾಳುಗಳು. ಗಾಯಗೊಂಡವರನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



