ಮಂಡ್ಯ: KSRTC ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೆ ಬೈಕ್ ಸವಾರರಿಬ್ಬರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಗ್ರಾಮದ ಬಳಿ ನಡೆದಿದೆ. ಮಳವಳ್ಳಿಯ ಮಂಚನಹಳ್ಳಿ ಗ್ರಾಮದ ದೊಡ್ಡಮಾದಯ್ಯ( 64), ನಾಗಸ್ವಾಮಿ (52 )ಮೃತ ದುರ್ದೈವಿಗಳಾಗಿದ್ದು,
Advertisement
ಮೃತರಿಬ್ಬರು ಗ್ರಾಮದಿಂದ ಮಳವಳ್ಳಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ, ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.