ಹಾಸನ ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ: 9 ಮಂದಿ ಸಾವು – PM ಮೋದಿ ಸಂತಾಪ

0
Spread the love

ಹಾಸನ:- ಹಾಸನ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಭತ್ತು ಮಂದಿ ಸಾವನ್ನಪ್ಪಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Advertisement

ಈ ಸಂಬಂಧ X ಮಾಡಿರುವ ಮೋದಿ, ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಹಣವನ್ನು ಘೋಷಿಸಿದ್ದಾರೆ.

ಏನಿದು ಘಟನೆ!

ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here