ಚೆನ್ನೈ: ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಐವರು ಅಯ್ಯಪ್ಪ ಭಕ್ತರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ವಂಗರ ರಾಮಕೃಷ್ಣ (51), ಮಾರ್ಪಿನ ಅಪ್ಪಲನಾಯ್ಡು (33), ರಾಮು (50), ಮರುಪಲ್ಲಿಯ ಬಂಡಾರು ಚಂದ್ರರಾವ್ (35) ಮೃತರು ಎಂದು ಗುರುತಿಸಲಾಗಿದೆ. ಘಟನೆಯು ಬೆಳಗ್ಗಿನ ಜಾವ 2:15 ಕ್ಕೆ ಸಂಭವಿಸಿದೆ. ಈ ಅಪಘಾತದಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರಾಮನಾಥಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ವರದಿಯ ಪ್ರಕಾರ, ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ವಿಜಯನಗರ ಮತ್ತು ವಿಶಾಖಪಟ್ಟಣಂ ಜಿಲ್ಲೆಗಳ ಅಯ್ಯಪ್ಪ ಭಕ್ತರು ಎಂದು ಗುರುತಿಸಲಾಗಿದೆ. ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದು ರಾಮೇಶ್ವರಂ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.



