ಭೀಕರ ಅಪಘಾತ: ಕೋಲಾರ ಮೂಲದ ಬಾಡಿ ಬಿಲ್ಡರ್ ಅಮೆರಿಕದಲ್ಲಿ ಸಾವು!

0
Spread the love

ಕೋಲಾರ:- ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಸಾವನ್ನಪ್ಪಿರುವ ಘಟನೆ ಅಮೆರಿಕದ ಟೆಕ್ಸಾಸ್‍ನಲ್ಲಿ ಜರುಗಿದೆ.

Advertisement

ಸುರೇಶ್ ಕುಮಾರ್ (42) ಮೃತ ದುರ್ದೈವಿ. ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ ದೈಹಿಕ ತರಬೇತಿಯನ್ನೂ ಸಹ ಅವರು ನೀಡಿದ್ದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here