ಬಳ್ಳಾರಿ:- ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಂಡ್ಯ ಮೂಲದ 38 ವರ್ಷದ ಶ್ವೇತಾ, ಕನಕಪುರ ಮೂಲದ 42 ವರ್ಷದ ಬಾಲನಾಯಕ ಮೃತ ದುರ್ದೈವಿಗಳು. ಮಂತ್ರಾಲಯದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ಹಾಗೂ ಬಳ್ಳಾರಿಗೆ ವಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಳ್ಳಾರಿ ಎಸ್ಪಿ ಡಾ. ಶೋಭಾರಾಣಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.