ಗದಗ:- ಕೊಡಲಿಯಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ಜರುಗಿದೆ.
Advertisement
ಗ್ರಾಮದ ಸುರೇಶ್ ಬೇಲೇರಿ ಎಂಬ ಯುವಕನ ಮೇಲೆ ಹಲ್ಲೆ ನಡೆದಿದ್ದು, ಮಂಜುನಾಥ ಬೇಲೇರಿ ಅಂಡ್ ಗ್ಯಾಂಗ್ ನಿಂದ ಕೃತ್ಯ ನಡೆದಿದೆ. ಘಟನೆಯಲ್ಲಿ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದು, ಯಶವಂತ ಬೆಲೇರಿಗೆ ಸಣ್ಣಪುಟ್ಟ ಗಾಯವಾಗಿದೆ.
ಗಾಯಾಳು ಸುರೇಶ್ ಗದಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದ್ದು, ಯಶವಂತಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಬ್ಬರು ಮಹಿಳೆಯರು ಸೇರಿ ಐದು ಜನ್ರಿಂದ ಹಲ್ಲೆ ನಡೆದಿದ್ದು, ಕೂಡಲೇ ಮಾಹಿತಿ ಕಲೆ ಹಾಕಿ ಮಂಜುನಾಥ್, ಅಜ್ಜಪ್ಪ ಸೇರಿ ಮೂರು ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.