ರಾಯಚೂರು:- ಭೀಕರ ರಸ್ತೆ ಅಪಘಾತ ಸಂಭವಿಸಿ,ಕುರಿ ಖರೀದಿಸಲು ಹೋಗ್ತಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ದೇವದುರ್ಗ ತಾ. ಅಮರಾಪುರ ಗ್ರಾಮದ ಬಳಿ ಜರುಗಿದೆ.
Advertisement
ಬೊಲೆರೋ ಪಿಕಪ್ ವಾಹನವು ರಾಷ್ಟ್ರೀಯ ಹೆದ್ದಾರಿ ಬಳಿಯ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕುರಿಗಳ ಖರೀದಿಗೆ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ತೆಲಂಗಾಣದ ಹಿಂದೂಪುರ ಮೂಲದ ನಾಗರಾಜ್, ಸೋಮ, ನಾಗಭೂಷಣ, ಮುರಳಿ ಎಂದು ಗುರುತಿಸಲಾಗಿದೆ. ಹಿಂದೂಪುರದಿಂದ ಶಹಾಪೂರ ಸಂತೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಗಬ್ಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.