ಹಾಸನ : ಕುಂಭಮೇಳಕ್ಕೆ ಹೋಗುವ ವೇಳೆ ಭೀಕರ ಅಪಘಾತ ಸಂಭವಿಸಿ ಹಾಸನ ಮೂಲದ ಯುವಕ ಮೃತ ಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ಜರುಗಿದೆ..
Advertisement
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್(30) ಮೃತ ಯುವಕನಾಗಿದ್ದು, ಇನ್ನು ಪ್ರಜ್ವಲ್, ಹರೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುಪ್ಪಲತಾ (62) ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕುಟುಂಬದ ಜೊತೆ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿತಿನ್ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.
ನಿತಿನ್ ತಾಯಿ ಪುಷ್ಪ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನಿತಿನ್ ಮೃತದೇಹವನ್ನು ಅದೇ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.