• About
  • Advertise
  • Privacy & Policy
  • Contact
Thursday, November 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Uncategorized

ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ; ಸುಪ್ರೀಂ ಕೋರ್ಟ್‌ನತ್ತ ಎಲ್ಲರ ಚಿತ್ತ!

Vijaya Sakshi News Desk by Vijaya Sakshi News Desk
November 25, 2026
in Uncategorized
ವಿನಯ್‌ ಕುಲಕರ್ಣಿಗೆ ಬಿಗ್ ಶಾಕ್:  ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು!
0
SHARES
3
VIEWS
Share on Facebook

ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಇಂದು ಮಹತ್ವದ ದಿನವಾಗಿದೆ.

ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.

ನ್ಯಾ. ಪ್ರಶಾಂತ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಇಂದು ಹೊರಬೀಳಲಿರುವ ಆದೇಶದ ಮೇಲೆ ಎಲ್ಲರ ಗಮನ ನೆಟ್ಟಿದೆ. ಈಗಾಗಲೇ ಎರಡು ಬಾರಿ ಜಾಮೀನು ರದ್ದಾಗಿರುವ ವಿನಯ್ ಕುಲಕರ್ಣಿ ಅವರಿಗೆ ಈ ತೀರ್ಪು ನಿರ್ಣಾಯಕವಾಗಲಿದೆ.

ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯ:

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ದೋಷಿಗಳೆಂದು ಘೋಷಿಸಿತ್ತು. ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ ಏಳು ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಲಾಗಿತ್ತು.

ಈ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಜುಲೈ 31ರಂದು ಹೈಕೋರ್ಟ್ ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರ ಶಿಕ್ಷೆ ಹಾಗೂ ಅಪರಾಧ ನಿರ್ಣಯಕ್ಕೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು.

ಆದರೆ, ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಸುಪ್ರೀಂ ಕೋರ್ಟ್‌ನಲ್ಲಿ ವಾದ-ಪ್ರತಿವಾದ:

ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿದ್ದು, ಗಂಭೀರ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಅಮಾನತುಗೊಳಿಸುವಾಗ ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳು ಹಾಗೂ ಕಾನೂನು ತತ್ವಗಳನ್ನು ಪಾಲಿಸಬೇಕೆಂದು ಹೇಳಿದ್ದಾರೆ. ಹೈಕೋರ್ಟ್ ವಿನಯ್ ಕುಲಕರ್ಣಿ ಅವರ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿರುವುದು ಸರಿಯಲ್ಲ ಎಂದು ವಾದಿಸಿದ್ದಾರೆ.

ಇನ್ನೊಂದೆಡೆ, ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ.

ಯೋಗೇಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಬೆಳವಣಿಗೆಗಳು:

  • ಜೂನ್ 15, 2016: ಯೋಗೇಶ್ ಗೌಡ ಹತ್ಯೆ.
  • 2019: ರಾಜ್ಯ ಸರ್ಕಾರದಿಂದ ಪ್ರಕರಣ ಸಿಬಿಐಗೆ ಹಸ್ತಾಂತರ.
  • ನವೆಂಬರ್ 5, 2020: ವಿನಯ್ ಕುಲಕರ್ಣಿ ಬಂಧನ.
  • ಆಗಸ್ಟ್ 2021: ಸುಪ್ರೀಂ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು.
  • ಮೇ 2023: ಧಾರವಾಡ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ.
  • ಜೂನ್ 2025: ಸುಪ್ರೀಂ ಕೋರ್ಟ್‌ನಿಂದ ಮತ್ತೆ ಜಾಮೀನು ರದ್ದು.
  • ಏಪ್ರಿಲ್ 15, 2026: 16 ಮಂದಿ ದೋಷಿಗಳೆಂದು ವಿಚಾರಣಾ ನ್ಯಾಯಾಲಯದ ತೀರ್ಪು.
  • ಏಪ್ರಿಲ್ 17, 2026: ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ.
  • ಮೇ 2026: ಶಾಸಕ ಸ್ಥಾನದಿಂದ ಅನರ್ಹತೆ.
  • ಜುಲೈ 30-31, 2026: ಹೈಕೋರ್ಟ್‌ನಿಂದ ಶಿಕ್ಷೆ ಅಮಾನತು ಹಾಗೂ ಜಾಮೀನು.
  • ಅಕ್ಟೋಬರ್ 2026: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ.

ಸದ್ಯ ಎರಡನೇ ಬಾರಿಗೆ ಜಾಮೀನಿನ ಮೇಲೆ ಹೊರಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್‌ನ ತೀರ್ಪು ಅತ್ಯಂತ ಮಹತ್ವದ್ದಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನು ರದ್ದಾದರೆ ಅವರು ಮತ್ತೆ ಜೈಲು ಸೇರಬೇಕಾಗುತ್ತದೆ. ಹೀಗಾಗಿ ಇಂದು ಹೊರಬೀಳಲಿರುವ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ರಾಜಕೀಯ ವಲಯದಲ್ಲೂ ಕುತೂಹಲ ಹೆಚ್ಚಾಗಿದೆ.

Tags: kannadanewsKarnatakaSupreme Court VerdictVijayasakshivijayasakshinewsVinay KulkarniYogesh Gowda Murder Case
ShareSendShare
Previous Post

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವಿಚಾರದಲ್ಲಿ ಸುಳ್ಳು ಮಾಹಿತಿ? ಕೆಪಿಎಸ್‌ಸಿ ಆರೋಪಿ ಕನ್ನಾಳೆ ಮತ್ತೆ ಜೈಲುಪಾಲು!

Next Post

Koppala Breaking: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Koppala Breaking: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು!

Koppala Breaking: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

November 26, 2026
ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿಗೆ ಗಾಯ!

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿಗೆ ಗಾಯ!

November 26, 2026
ಚಳಿಗಾಲದಲ್ಲಿ ಕೂದಲು ಉದುರುವಿಕೆ ಹೆಚ್ಚಾಗುತ್ತಿದೆಯೇ? ಕೂದಲಿನ ಆರೋಗ್ಯ ಕಾಪಾಡಲು ಈ 5 ಸಲಹೆ ಪಾಲಿಸಿ

ಚಳಿಗಾಲದಲ್ಲಿ ಕೂದಲು ಉದುರುವಿಕೆ ಹೆಚ್ಚಾಗುತ್ತಿದೆಯೇ? ಕೂದಲಿನ ಆರೋಗ್ಯ ಕಾಪಾಡಲು ಈ 5 ಸಲಹೆ ಪಾಲಿಸಿ

November 26, 2026
ಛಬ್ಬಿಯಿಂದ ಶಿರಹಟ್ಟಿವರೆಗೆ ಪಾದಯಾತ್ರೆ, ಕಾಂಗ್ರೆಸ್ ಸರ್ಕಾರ ವಜಾಕ್ಕೆ ರಾಜ್ಯಪಾಲರಿಗೆ ಮನವಿ

ಛಬ್ಬಿಯಿಂದ ಶಿರಹಟ್ಟಿವರೆಗೆ ಪಾದಯಾತ್ರೆ, ಕಾಂಗ್ರೆಸ್ ಸರ್ಕಾರ ವಜಾಕ್ಕೆ ರಾಜ್ಯಪಾಲರಿಗೆ ಮನವಿ

November 26, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

November 26, 2026
ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿಗೆ ಗಾಯ!

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿಗೆ ಗಾಯ!

November 26, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper