ನೆಲಮಂಗಲ:– ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್ನಲ್ಲಿ ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವ ಕೊಲೆ ಮಾಡಿರುವ ಘಟನೆ ಜರುಗಿದೆ.
ಕೊಲೆಯಾದ ಬಾಲಕನನ್ನು 14 ವರ್ಷದ ಅಮೋಘ ಕೀರ್ತಿ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಮಾವ ನಾಗಪ್ರಸಾದ್(50) ನನ್ನು ಬಂಧಿಸಿದ್ದಾರೆ. ಮೃತ ಬಾಲಕ ನಾಗಪ್ರಸಾದ್ ಸಹೋದರಿ ಶಿಲ್ಪಾ ಮಗ. ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ಬಾಲಕ ಅಮೋಘ ಕೀರ್ತಿ ವಾಸವಿದ್ದ. ಈ ವೇಳೆ ಮೊಬೈಲ್ನಲ್ಲಿ ಫ್ರೀಫೈರ್ ಗೇಮ್ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.
ಸೋಮವಾರ ಬೆಳಗಿನ ಜಾವ 4.30ಕ್ಕೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ನಾಗಪ್ರಸಾದ್, ನಂತರ ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ ಅಲ್ಲಿಗೆ ಹೋಗಲು ಕೂಡ ಹಣವಿಲ್ಲದೆ ಮೆಜೆಸ್ಟಿಕ್ನಲ್ಲಿ 3 ದಿನ ಕಾಲಕಳೆದಿದ್ದಾರೆ. ನಂತರ ಸೋಲದೇವನಹಳ್ಳಿ ಠಾಣೆಗೆ ಹೋಗಿ ಶರಣಾಗಿದ್ದಾರೆ.