ಕಲಬುರಗಿ: ಜಿಲ್ಲೆಯ ಕಮಲಾಪುರ ತಹಸೀಲ್ದಾರ್ ಕಚೇರಿಯಲ್ಲಿ ಭಾರೀ ಲಂಚ ಪ್ರಕರಣ ಬೆಳಕಿಗೆ ಬಂದಿದೆ. ತಹಸೀಲ್ದಾರ್ ಕಚೇರಿಯ ಎಫ್ಡಿಎ ಶಶಿಕುಮಾರ್, ಜಮೀನು ದಾಖಲೆಗಳನ್ನು ನೀಡುವ ಪ್ರಕರಣದಲ್ಲಿ ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ, ಲೋಕಾ ಇನ್ಸಪೆಕ್ಟರ್ ಅರುಣ್ ಕುಮಾರ್ ಮುರಗುಂಡಿ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ.
ಶಶಿಕುಮಾರ್ ಹಣವನ್ನು ಕಿಶನ್ ರಾಠೋಡ್ ಅವರಿಂದ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ನಲ್ಲಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ದಾಳಿ ಮೂಲಕ ಸ್ಥಳದಲ್ಲೇ ಲಂಚದ ಹಣ ವಶಪಡಿಸಿಕೊಂಡು, ಶಶಿಕುಮಾರ್ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಈ ದಾಳಿ, ಕಮಲಾಪುರ ತಹಸೀಲ್ದಾರ್ ಕಚೇರಿಯಲ್ಲಿ ನಡೆಯುತ್ತಿದ್ದ ಲಂಚ ಪಡೆಯುವ ಚಟುವಟಿಕೆ ಮತ್ತು ಅಧಿಕಾರಿಗಳ ಭ್ರಷ್ಟಾಚಾರ ಕುರಿತು ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ.



