ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್ ಕಾನ್ಸಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೆಚ್.ಸಿ.ತಿಪ್ಪಣ್ಣ ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿ ಹಾಗೂ ಮಾವ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸಿವಿ ರಾಮನ್ ನಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
Advertisement
ತಿಪ್ಪಣ್ಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಬೈಯ್ಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.