HomeGadag Newsಕ್ವಾರಿ ಕಾರ್ಮಿಕರ ಫೆಡರೇಷನ್ ಗದಗ ಜಿಲ್ಲಾ ಸಮಿತಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

ಕ್ವಾರಿ ಕಾರ್ಮಿಕರ ಫೆಡರೇಷನ್ ಗದಗ ಜಿಲ್ಲಾ ಸಮಿತಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾ ಕ್ರೀಡಾಂಗಣ ಎದುರಿನ ರೋಟರಿ ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವವರ ಕ್ವಾರಿ ಕಾರ್ಮಿಕರ ಫೆಡರೇಷನ್ ಗದಗ ಜಿಲ್ಲಾ ಸಮಿತಿ (ಆಲ್ ಇಂಡಿಯಾ ಟ್ರೇಡ್ ಯುನಿಯನ್ ಕಾಂಗ್ರೆಸ್) ವತಿಯಿಂದ ಮೇ 1ರಂದು ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಹರ್ಲಾಪೂರದ ಕೊಟ್ಟೂರೇಶ್ವರ ಮಠದ ಶ್ರೀ ಮ.ನಿ.ಪ್ರ. ಅಭಿನವ ಡಾ. ಕೊಟ್ಟೂರೇಶ್ವರ ಮಹಾಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ಎ.ಐ.ಟಿ.ಯು.ಸಿ. ಗದಗ ಜಿಲ್ಲಾ ಸಮಿತಿ ಅಧ್ಯಕ್ಷ ಕಾಂ. ಎಮ್.ಆಯ್. ನವಲೂರು ವಹಿಸುವರು. ಉದ್ಘಾಟನೆಯನ್ನು ಗದಗ ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಎಸ್.ಸೋದುನಕಟ್ಟಿ, ಕಾರ್ಮಿಕ ನಿರೀಕ್ಷಕ ಉಮೇಶ ಎಚ್. ಹುಲ್ಲಣ್ಣವರ, ಕೆ.ಟಿ.ಸಿ. ಟ್ರೇಡರ್ಸ್ನ ಜಗನ್ನಾಥ ಚ್ಯಾಗಿ, ಅತಿಥಿಗಳಾಗಿ ಜಾನಪದ ಕಲಾವಿದ ಗವಿಸಿದ್ದಯ್ಯ ಜ. ಹಳ್ಳಿಕೇರಿಮಠ ಜಂತ್ಲಿ-ಶಿರೂರ ಪಾಲ್ಗೊಳ್ಳುವರು.

ಮುಖ್ಯಮಂತ್ರಿ ಪದಕ ವಿಜೇತರಾದ ಪಿ.ಎಸ್.ಐ ಲಾಲಸಾಬ ಜೂಲಕಟ್ಟಿ, ರಾಜ್ಯ ಗುಪ್ತಚರ ಘಟಕದ ಸಿದ್ದರಡ್ಡಿ ಕಪ್ಪತ್ತನವರ, ಪ್ರವೀಣ ಕಲ್ಲೂರರನ್ನು ಸನ್ಮಾನಿಸಲಾಗುವುದು. ಎಲ್ಲ ಕಟ್ಟಡ ಕಾರ್ಮಿಕರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾರ್ಮಿಕ ಸಂಘಟನೆಯ ಮುಖಂಡರಾದ ಎಂ.ಐ. ನವಲೂರ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!