ವಿಜಯಸಾಕ್ಷಿ ಸುದ್ದಿ, ಗದಗ: ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಅವರು ಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿಗೆ ಆರೋಗ್ಯ ಇಲಾಖೆಯ ಮುಂಡರಗಿ ತಾಲೂಕಿನ ಕಲಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಿರಿಜಾ ಕೆ. ದಾನಪ್ಪಗೌಡ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇವಡ್ಡಟ್ಟಿಯಲ್ಲಿ ಸೇವೆ ಸಲ್ಲಿಸುತ್ತಿರುವ ಜಬೀನಾ ಬೋಧಲೆಖಾನ್, ಪ್ರಾಥಮಿಕ ಆರೋಗ್ಯ ಕೇಂದ್ರ ಜಂತ್ಲಿ ಶಿರೂರಲ್ಲಿ ಸೇವೆ ಸಲ್ಲಿಸುತ್ತಿರುವ ಶೀರಿನ್ ಎಂ. ಕಾಗದಗಾರ್, ತಬಸುಮಬೇಗಂ ರೋಣದ ಮತ್ತು ಭಗವಾನ್ ಬುದ್ಧ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ ಪಡೆದ ಎಂ.ಕೆ. ಸ್ವಾಮಿ ಅವರಿಗೆ ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅಕಾಡೆಮಿಯ ರಾಷ್ಟ್ರೀಯ ಅಧ್ಯಕ್ಷ ಡಾ. ಸಮಾನಸ್ಕರ್ ಪ್ರಶಸ್ತಿ ಪ್ರದಾನ ಮಾಡಿದರು. ಇವರಿಗೆ ಗದಗ ಜಿಲ್ಲೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್.ಎಸ್. ನೀಲಗುಂದ, ತಾಲೂಕಾ ಆರೋಗ್ಯಾಧಿಕಾರಿ ಡಾ. ಲಕ್ಷ್ಮಣ್ ಪೂಜಾರ, ತಾಲೂಕಾಸ್ಪತ್ರೆಯ ವೈದ್ಯಾಧಿಕಾರಿಗಳು, ಮುಂಡರಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಸೇರಿದಂತೆ ಗದಗ ಜಿಲ್ಲೆಯ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಅಭಿನಂದನೆ ತಿಳಿಸಿದ್ದಾರೆ.



