ನಡು ರಸ್ತೆಯಲ್ಲೇ ಮಹಿಳಾ ಕಾನ್ಸ್‌ಟೇಬಲ್ ಬರ್ಬರ ಹತ್ಯೆ: ಸಹೋದರನಿಂದಲೇ ಕೃತ್ಯ!

0
Spread the love

ಹೈದರಾಬಾದ್:- ನಡು ರಸ್ತೆಯಲ್ಲೇ ಮಹಿಳಾ ಕಾನ್ಸ್‌ಟೇಬಲ್ ಓರ್ವರನ್ನು ಬರ್ಬರವಾಗಿ ಆಕೆಯ ಸಹೋದರನೆ ಹತ್ಯೆಗೈದಿರುವ ಘಟನೆ ಹೈದರಾಬಾದ್‌ನ ಇಬ್ರಾಹಿಂಪುರದಲ್ಲಿ ಜರುಗಿದೆ.

Advertisement

ಮೃತ ಮಹಿಳೆಯು, ತೆಲಂಗಾಣ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್ ಆಗಿದ್ದರು. ಅಲ್ಲದೇ ಇತ್ತೀಚೆಗೆ ಪ್ರೇಮ ವಿವಾಹವಾಗಿದ್ದರು. ಆದರೆ ಸೋಮವಾರ ದ್ವಿಚಕ್ರ ವಾಹನದಲ್ಲಿ ಕರ್ತವ್ಯಕ್ಕೆ ತೆರಳುತ್ತಿರುವ ವೇಳೆ ಈ ಹತ್ಯೆ ನಡೆದಿದ್ದು, ಈ ಕೊಲೆಯನ್ನು ಪೊಲೀಸರು ಮರ್ಯಾದಾ ಹತ್ಯೆ ಪ್ರಕರಣವೆಂದು ಶಂಕಿಸಿದ್ದಾರೆ.

ಕಾರಿನಲ್ಲಿ ಬಂದಿದ್ದ ಆರೋಪಿ ಹಿಂದಿನಿಂದ ಮಹಿಳೆಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಆಕೆ ಕೆಳಗೆ ಬಿದ್ದಾಗ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ. ಇದು ಮರ್ಯಾದಾ ಹತ್ಯೆಯ ಪ್ರಕರಣವೇ ಎಂಬುವುದರ ತನಿಖೆ ನಡೆಸುತ್ತಿದ್ದೇವೆ. ಮೃತ ಮಹಿಳೆ ಮತ್ತು ಸಹೋದರನ ನಡುವೆ ಜಮೀನಿನ ವಿಚಾರವಾಗಿ ಗಲಾಟೆ ನಡೆದಿರುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹೀಗಾಗಿ ಇದು ಆಸ್ತಿಗಾಗಿ ನಡೆದಿರುವ ಕೊಲೆಯೋ? ಅಥವಾ ಪ್ರೀತಿ ಮಾಡಿ ಮದುವೆ ಆಗಿದ್ದಕ್ಕೆ ಮರ್ಯಾದೆ ಹತ್ಯೆ ಮಾಡಿರುವುದೋ!? ಎಂಬೆಲ್ಲಾ ಪ್ರಶ್ನೆಗೆ ಪೊಲೀಸ್ ತನಿಖೆಯಲ್ಲಿ ಉತ್ತರ ಸಿಗಬೇಕಾಗಿದೆ.


Spread the love

LEAVE A REPLY

Please enter your comment!
Please enter your name here