HomeKarnataka Newsಫೆಂಗಲ್‌ ಸೈಕ್ಲೋನ್ ಎಫೆಕ್ಟ್: ಕರ್ನಾಟಕದಲ್ಲಿ ಭಾರೀ ಮಳೆ, ಇಲ್ಲೆಲ್ಲಾ ರಜೆ ಘೋಷಣೆ!

ಫೆಂಗಲ್‌ ಸೈಕ್ಲೋನ್ ಎಫೆಕ್ಟ್: ಕರ್ನಾಟಕದಲ್ಲಿ ಭಾರೀ ಮಳೆ, ಇಲ್ಲೆಲ್ಲಾ ರಜೆ ಘೋಷಣೆ!

For Dai;y Updates Join Our whatsapp Group

Spread the love

ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅವಾಂತರಗಳನ್ನೇ ಸೃಷ್ಟಿಸಿದೆ. ಇದರ ಪರಿಣಾಮ ಕರ್ನಾಟಕದ ಮೇಲೂ ತಟ್ಟಿದೆ.

ಬಂಗಾಳಕೊಲ್ಲಿ ನೈಋತ್ಯ ಭಾಗದಿಂದ ವೇಗವಾಗಿ ಬಂದ ಚಂಡಮಾರುತ ‘ಫೆಂಗಲ್’ ಕರಾವಳಿ ಜಿಲ್ಲೆಗಳನ್ನು ತಲ್ಲಣಗೊಳಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಇನ್ನಿಲ್ಲದಂತೆ ಸರ್ಕಾರ, ಜನರನ್ನು ಕಾಡಿದೆ. ಬೆಂಗಳೂರು ಮತ್ತು ಕರ್ನಾಟಕ ಭಾಗದಲ್ಲಿ ಚಂಡಮಾರುತ ಎಫೆಕ್ಟ್ ಸಾಕಷ್ಟು ಪ್ರಮಾಣದಲ್ಲಿ ಉಂಟಾಗಿದೆ.

ಅದರಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮೊದಲ ಎರಡು ದಿನ ಅಂದರೆ ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರಿ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ.

ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಮತ್ತು ರಾಮನಗರ, ಮಂಡ್ಯ, ಹಾಸನ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

ಇನ್ನೂ ಡಿ.5 ಮತ್ತು ಡಿ.6ರಂದು ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆಯು ಮುನ್ಸೂಚನೆ ಕೊಟ್ಟಿದೆ.

ಎಲ್ಲೆಲ್ಲಿಎಷ್ಟು ಮಳೆ?

ಚಾಮರಾಜನಗರ ಜಿಲ್ಲೆಯಲ್ಲಿ 5 ಸೆಂ.ಮೀ, ಬಂಡೀಪುರ, ಕೋಲಾರ ಜಿಲ್ಲೆಯ ರಾಯಲ್ಪಾಡುನಲ್ಲಿತಲಾ 4 ಸೆಂ.ಮೀ, ಕೊಡಗು ಜಿಲ್ಲೆಯ ಭಾಗಮಂಡಲ, ಎಂಎಂ ಹಿಲ್ಸ್‌, ಮಂಡ್ಯ, ಮೈಸೂರು ಜಿಲ್ಲೆಯ ನಂಜನಗೂಡು, ಬೆಂಗಳೂರು ನಗರ ಜಿಲ್ಲೆಯ ಎಚ್‌ಎಎಲ್‌ , ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಸೋಮವಾರ ತಲಾ 3 ಸೆಂ.ಮೀ ಮಳೆಯಾಗಿದೆ.

ಹಲವು ಜಿಲ್ಲೆಗಳಲ್ಲಿ ಇಂದು ರಜೆ:

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!