HomeGadag Newsಇಂದಿನ ಮತದಾನೋತ್ಸವಕ್ಕೆ ಕ್ಷೇತ್ರ ಸಜ್ಜು

ಇಂದಿನ ಮತದಾನೋತ್ಸವಕ್ಕೆ ಕ್ಷೇತ್ರ ಸಜ್ಜು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಹಾವೇರಿ-ಗದಗ ಹಾಗೂ ಬಾಗಲಕೋಟ ಲೋಕಸಭೆ ಚುನಾವಣಾ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೋಮವಾರ ಇವಿಎಂ ಯಂತ್ರಗಳೊಂದಿಗೆ ತಮ್ಮ ತಮ್ಮ ಮತಗಟ್ಟೆಗಳತ್ತ ಸಾಗಿದರು.

ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಶಿರಹಟ್ಟಿ, ರೋಣ ಮತ್ತು ಗದಗ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 741 ಹಾಗೂ ಬಾಗಲಕೋಟ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ನರಗುಂದ ಮತಕ್ಷೇತ್ರದಲ್ಲಿ 220 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 961 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಆಯೋಗದ ಸೂಚನೆಯಂತೆ ಎಲ್ಲ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಈವರೆಗೆ ಕೇವಲ 1 ಪ್ರಕರಣ ದಾಖಲಾಗಿದ್ದು, ಅಬಕಾರಿ ಕಾಯ್ದೆ ಉಲ್ಲಂಘನೆಯಡಿ 53 ಪ್ರಕರಣ ದಾಖಲಾಗಿದೆ. ಒಟ್ಟು 62,58,560 ರೂ. ನಗದು, 37,87,668 ರೂ. ಮೌಲ್ಯದ 13727.765 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.

election

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿತ್ತು. ಆ ಪೈಕಿ ಜಿಲ್ಲೆಯಲ್ಲಿ ದಾಖಲೆಯ ಶೇ. 96.56ರಷ್ಟು ಮತದಾನವಾಗಿದೆ. ಅಂತೆಯೇ ವಿಶೇಷ ಚೇತನರು ಶೇ. 96.46ರಷ್ಟು ಮತ ಚಲಾಯಿಸಿದ್ದಾರೆ.

ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ನೋದಣಿಯಾಗಿದ್ದ 100 ಹಿರಿಯ ಮತದಾರರಲ್ಲಿ 95, ಗದಗ-118ರಲ್ಲಿ 113, ರೋಣ-168ರಲ್ಲಿ 158, ನರಗುಂದ-83ರಲ್ಲಿ 78 ಹಿರಿಯರು ಮನೆಯಿಂದಲೇ ಮತ ಚಲಾಯಿಸಿದ್ದು, ಒಟ್ಟೂ 469 ನೋದಾಯಿತ ಹಿರಿಯ ಮತದಾರರಲ್ಲಿ 444 ಮತದಾರರು ಮತ ಚಲಾಯಿಸಿ ಶೇ. 94.67ರಷ್ಟು ಮತದಾನ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img