HomeKarnataka Newsಮದುವೆಯಾದ ದಿನವೇ ಹೊಡೆದಾಟ: ಮರಣೋತ್ತರ ಪರೀಕ್ಷೆಯಲ್ಲಿ ಸಾವಿನ ಅಸಲಿ ಸತ್ಯ ಬಯಲು!

ಮದುವೆಯಾದ ದಿನವೇ ಹೊಡೆದಾಟ: ಮರಣೋತ್ತರ ಪರೀಕ್ಷೆಯಲ್ಲಿ ಸಾವಿನ ಅಸಲಿ ಸತ್ಯ ಬಯಲು!

For Dai;y Updates Join Our whatsapp Group

Spread the love

ಕೋಲಾರ:-ಮದುವೆಯಾದ ದಿನವೇ ಹೊಡೆದಾಟ ಕೇಸ್ ಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯಲ್ಲಿ ಸಾವಿನ ಅಸಲಿ ಸತ್ಯ ಬಯಲಾಗಿದೆ.

ಹೌದು, ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬಾರಸನಹಳ್ಳಿ ಗ್ರಾಮದಲ್ಲಿ ಲಿಖಿತಾಶ್ರೀ ಹಾಗೂ ನವೀನ್ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದರು.

ಬಳಿಕ ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡು ಮಸಣ ಸೇರಿದ್ದಾರೆ. ಈ ಘಟನೆ ಇಡೀ ಕೋಲಾರವನ್ನೇ ಬೆಚ್ಚಿಬೀಳಿಸಿದ್ದು ಇವರ ಸಾವಿಗೆ ನಿಖರ ಕಾರಣ ಮಾತ್ರ ತಿಳಿದು ಬಂದಿಲ್ಲ.

ಆದರೆ ಒಂದಿಲ್ಲೊಂದು ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆ ಈ ಕೊಲೆಯಲ್ಲಿ ಮೂರನೇ ವ್ಯಕ್ತಿ ಇರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಮತ್ತಷ್ಟು ಅಂಶಗಳು ಬಯಲಾಗಿವೆ.

ಸಂಜೆ ರೂಮ್​ಗೆ ಹೋಗಿ ಬಾಗಿಲು ಹಾಕಿಕೊಂಡ ದಂಪತಿ ಪರಸ್ಪರ ಹೊಡೆದಾಡಿಕೊಂಡಿದ್ದರು. ಲಿಖಿತಾಶ್ರೀ ಕೆಜಿಎಫ್ ಆಸ್ಪತ್ರೆಯಲ್ಲಿ ಮೊನ್ನೆ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ನವೀನ್ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಪ್ರಾಣಬಿಟ್ಟಿದ್ದಾರೆ.

ಈ ಘಟನೆಯಲ್ಲಿ ದಂಪತಿ ಬಾಳು ಅಂತ್ಯವಾಗಲು ನಿಖರ ಕಾರಣವೇನೆಂಬುವುದು ಪತ್ತೆಯಾಗಿಲ್ಲ. ಆದರೆ ಮೂರನೇ ವ್ಯಕ್ತಿ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ನವ ವಧು ವರನ ಮರಣೋತ್ತರ ಪರೀಕ್ಷೆಯಲ್ಲಿ ಕೆಲವು ಅಂಶಗಳು ಬಯಲಾಗಿವೆ.

ಲಿಖಿತಾಶ್ರೀ ಬಲ ಅಂಗೈ ಹಾಗೂ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ವರ ನವೀನ್ ತಲೆಯ ನೆತ್ತಿಯ ಭಾಗ ಹಾಗೂ ತಲೆಯ ಹಿಂಭಾಗಕ್ಕೆ ಮಚ್ಚಿನಿಂದ ಹೊಡೆದ ಗಾಯಗಳಾಗಿವೆ.

ಮೊದಲು ಲಿಖಿತಶ್ರೀ ಮೇಲೆ ಮಚ್ಚಿನಿಂದ ಹಲ್ಲೆ‌ ಮಾಡಿ ನಂತರ ತಾನೂ ತಲೆಗೆ ಮಚ್ಚಿನಿಂದ ಹೊಡೆದುಕೊಂಡಿದ್ದಾನೆ ಎಂಬ ಶಂಕೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ವ್ಯಕ್ತವಾಗಿದೆ.

ಲಿಖಿತಶ್ರೀ ನವೀನ್ ಮೇಲೆ ಹಲ್ಲೆ ಮಾಡಿಲ್ಲ ಅನ್ನೋದು ಸ್ಪಷ್ಟವಾಗಿದೆ. ಇಬ್ಬರಿಗೂ ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಒಬ್ಬರೂ ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು.

ಸದ್ಯ ಕೋಲಾರ ಜಿಲ್ಲೆ ಕೆಜಿಎಫ್ ಆ್ಯಂಡರ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ನವೀನ್ ವಿರುದ್ದ ಕೊಲೆ ಪ್ರಕರಣ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!