ಕಪ್ಪತಗುಡ್ಡ ಸಂರಕ್ಷಣೆಗೆ ಅಂತಿಮ ಅನುಮತಿ: ಹೋರಾಟಗಾರರ ಕನಸು ನನಸಾಗಿದೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕಪ್ಪತಗುಡ್ಡ ಸಂರಕ್ಷಣೆಗಾಗಿ ಕೇಂದ್ರದಿಂದ ಅಂತಿಮ ಅನುಮತಿಯನ್ನು ಪಡೆದಿದ್ದು, ರಾಜ್ಯ ಸರ್ಕಾರ ಹಾಗೂ ಸಚಿವ ಹೆಚ್.ಕೆ. ಪಾಟೀಲರ ಸತತ ಪ್ರಯತ್ನದಿಂದ ಜಗದ್ಗುರು ಸಿದ್ದಲಿಂಗ ಮಹಾಸ್ವಾಮಿಗಳೂ ಸೇರಿದಂತೆ ಹಲವಾರು ಹೋರಾಟಗಾರರ ಕನಸು ನನಸಾಗಿದೆ ಎಂದು ಅಖಿಲ ಕರ್ನಾಟಕ ಜನಶಕ್ತಿ ವೇದಿಕೆ ರಾಜ್ಯಾಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ ಅಭಿಪ್ರಾಯಪಟ್ಟಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶ್ರೀ ನಂದಿ ಸ್ವಾಮಿಗಳು, ಶ್ರೀ ತೋಂಟದ ಸಿದ್ದಲಿಂಗ ಸ್ವಾಮಿಗಳ ಜೊತೆಗೆ ಕಪ್ಪತಗುಡ್ಡ ರಕ್ಷಣೆಗಾಗಿ ಹೋರಾಟವನ್ನು ಮಾಡಿದರು. ಹಲವಾರು ಕನ್ನಡಪರ, ದಲಿತಪರ ಸಂಘಟನೆಗಳು ಪ್ರಾಮಾಣಿಕವಾಗಿ ಹೋರಾಟಗಳಲ್ಲಿ ಪಾಲ್ಗೊಂಡು ಕಪ್ಪತಗುಡ್ಡ ರಕ್ಷಣೆಗಾಗಿ ಹೋರಾಟ ಮಾಡಿದ್ದಾರೆ. ಆಎಲ್ಲ ಹೋರಾಟಗಾರರಿಗೆ ಇಂದು ಗೆಲುವು ಸಿಕ್ಕಂತಾಗಿದೆ ಎಂದು ಅವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here