HomeBengaluru Newsಚೆನ್ನಮ್ಮ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ: ಡಿ.ಕೆ. ಶಿವಕುಮಾರ್

ಚೆನ್ನಮ್ಮ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಅವರು, ಕುಟುಂಬದವರು ಸೋಮವಾರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಿದ್ದು, ಆ ಕಾರ್ಯಕ್ರಮಕ್ಕೆ ಸರ್ಕಾರದ ವತಿಯಿಂದ ಅಗತ್ಯ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

“ಕರ್ನಾಟಕ ಸರ್ಕಾರದ ವತಿಯಿಂದ ಚೆನ್ನಮ್ಮ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು. ಕುಟುಂಬದವರು ಸೋಮವಾರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದ್ದು, ಸರ್ಕಾರವೂ ಆ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ಅಂತ್ಯಕ್ರಿಯೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಚೆನ್ನಮ್ಮ ಅವರು ಮಾಜಿ ಪ್ರಧಾನಮಂತ್ರಿಯವರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವರ ತಾಯಿಯಾಗಿದ್ದ ಹಿನ್ನೆಲೆ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

“ದೇವೇಗೌಡ ಅವರ ಸುದೀರ್ಘ ರಾಜಕೀಯ ಪಯಣದ ಪ್ರತಿಯೊಂದು ಹಂತದಲ್ಲೂ ಚೆನ್ನಮ್ಮ ಅವರು ಬೆನ್ನೆಲುಬಾಗಿ ನಿಂತಿದ್ದರು. ಅವರ ಅಗಲಿಕೆ ರಾಜ್ಯಕ್ಕೆ ಹಾಗೂ ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಎಲ್ಲ ಸದಸ್ಯರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img