ಜಯಮಹಲ್ ರಸ್ತೆಯಲ್ಲಿ ಕಸ ಹಾಕಿದವರನ್ನು ಪತ್ತೆ ಮಾಡಿ ಕೇಸ್ ದಾಖಲಿಸಿ: ಡಿಸಿಎಂ ಡಿಕೆಶಿ

0
Spread the love

ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಗರದ ಕಸದ ಸಮಸ್ಯೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ, ಇಂದು ಕಾಂಗ್ರೆಸ್ ಕಚೇರಿಗೆ ಹೋಗುವಾಗ ಜಯಮಹಲ್ ರಸ್ತೆಯಲ್ಲಿ ಯಾರೋ ಒಂದು ಲೋಡ್ ಕಸ ಸುರಿದಿದ್ದಾರೆ. ನಿನ್ನೆ ರಾತ್ರಿ ಇರಲಿಲ್ಲ. ರಾತ್ರೊರಾತ್ರಿ ಬಂದು ಸುರಿದಿದ್ದಾರೆ ಎಂದರು.

Advertisement

ಈ ಕಸ ಸುರಿದವರು ಯಾರು ಎಂದು ಸಿಸಿಟಿವಿಯಲ್ಲಿ ಪತ್ತೆ ಮಾಡಿ ಅವನ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಅವನ ಗಾಡಿ ಸೀಜ್ ಮಾಡಬೇಕು ಎಂದು ನಗರದಲ್ಲಿ ಮಂಗಳವಾರ ಡಿಸಿಎಂ ಡಿಕೆಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನರು ಕೂಡ ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದಾರೆ ಎಂದು ಕೇಳಿದಾಗ,ಸಾರ್ವಜನಿಕರು ನಮಗೆ ಸಹಕಾರ ನೀಡುತ್ತಿಲ್ಲ ಎಂದು ಬೇಸರಿಸಿದರು. ವಾರ್ಡ್ ಗಳ ಬೌಂಡರಿ ನಿಗದಿ ಮಾಡಿ ಪ್ರಕಟಿಸಲಾಗಿದೆ ಎಂದು ಕೇಳಿದಾಗ, ಈ ಬಗ್ಗೆ ಮಾಹಿತಿ ಇಲ್ಲ. ಇದಕ್ಕಾಗಿ ಸಮಿತಿ ಇದೆ. ಸಾರ್ವಜನಿಕರ ಆಕ್ಷೇಪಣೆ ಇದ್ದರೆ ಸಲ್ಲಿಸಬಹುದು ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದರು.


Spread the love

LEAVE A REPLY

Please enter your comment!
Please enter your name here