ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಪಟ್ಟಣದ ಪೊಲೀಸರು ದಂಡ ವಿಧಿಸುವ ಮೂಲಕ ಚುರುಕು ಮುಟ್ಟಿಸಲಾರಂಭಿಸಿದ್ದಾರೆ. ಶನಿವಾರ ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ನಿಂತು ಹೆಲ್ಮೆಟ್ ಧರಿಸದ ಹಾಗೂ ದೋಷಪೂರಿತ ನಂಬರ್ ಪ್ಲೇಟ್ ಹೊಂದಿದ ಬೈಕ್ ಸವಾರರಿಗೆ ಪಿಎಸ್‌ಐ ಐಶ್ವರ್ಯ ನಾಗರಾಳ ದಂಡ ವಿಧಿಸಿದರು.
Advertisement
ಪಟ್ಟಣ ಹಾಗೂ ಹೋಬಳಿಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗಿದ್ದರಿಂದ ಅಪಘಾತಗಳೂ ಹೆಚ್ಚುತ್ತಿವೆ. ಆದ್ದರಿಂದ, ಪ್ರತಿಯೊಬ್ಬರೂ ಹೆಲೆಟ್ ಧರಿಸಿ ನಿಯಮ ಪಾಲನೆ ಜತೆಗೆ ಜೀವರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಪಿಎಸ್‌ಐ ಐಶ್ವರ್ಯ ನಾಗರಾಳ ಸವಾರರಿಗೆ ಎಚ್ಚರಿಕೆ ನೀಡಿದರು.