ಮಂಗಳೂರು: ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
Advertisement
ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದಾರೆ.
ಧರ್ಮ, ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿ 196, 352(2) ಪ್ರಕರಣ ದಾಖಲಾಗಿದೆ.