ಬೆಂಗಳೂರು: ಬೆದರಿಕೆ ಮತ್ತು ನಿಂದನೆ ಆರೋಪದಡಿ ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಎಂಬುವವರು ನೀಡಿದ ದೂರು ಆಧಾರದ ಮೇಲೆ BNS 351(2), 352 ಸೆಕ್ಷನ್ ಅಡಿ ರಜತ್ ಮತ್ತು ಕಿರಣ್ ವಿರುದ್ಧ ಪ್ರಕರಣ ದಾಖಲಾಗಿದ್ದು, ರಜತ್ ಎ1, ಎ2 ಆರೋಪಿ ಕಿರಣ್ ಎಂಬುವರನ್ನ ಮಾಡಲಾಗಿದೆ.
ಫೋನ್ ಕರೆ ಮುಖಾಂತರ ಬೆದರಿಕೆ ಹಾಕಿರೋ ಆರೋಪ ಮಾಡಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಡಾಗ್ ಸತೀಶ್ ಸ್ನೇಹವನ್ನು ಬಿಡಬೇಕೆಂದು ಬೆದರಿಕೆ ಹಾಕಿದ್ದಾರೆ. ದೂರುದಾರರ ಕಾರಿನ ಪೋಟೋ ಕಳಿಸಿ ಮೆಸೇಜ್ ಮೂಲಕ ಇದು ರಜತ್ ಬುಜ್ಜಿ… ಕಾಲ್ ಮಾಡ್ತಾ ಇದೀನಿ.. ವಾಪಸ್ ಕಾಲ್ ಮಾಡ್ತೀರಾ? ಇಲ್ವಾ ನಾವೇ ಒಳಗೆ ಹಾಕಿಸಬೇಕಾ ಎಂದು ಬೆದರಿಕೆ ಹಾಕಲಾಗಿದೆ.
ಅಷ್ಟೇ ಅಲ್ಲದೆ ಕಾನ್ಫರೆನ್ಸ್ ಕಾಲ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಸದ್ಯ ಕರೆಯಲ್ಲಿ ಮಾತನಾಡಿರೋದು ರಜತ್ ಅಥವಾ ಬೇರೆ ವ್ಯಕ್ತಿ ಎಂಬುವುದರ ಪರಿಶೀಲನೆ ನಡೆಸಲಾಗುತ್ತಿದೆ.
ಸದ್ಯ, ಕರೆ ಮಾಡಿದವರು ರಜತ್ ಎಂದು ಖಚಿತಪಡಿಸಲು ತನಿಖೆ ನಡೆಯುತ್ತಿದೆ. ಕೆ.ಆರ್. ಪುರಂ ಪೊಲೀಸರು ರಜತ್ ಮತ್ತು ಕಿರಣ್ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಮೂಲಕ ಮುಂದಿನ ಕ್ರಮ ಕೈಗೊಂಡಿದ್ದಾರೆ.



